ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಂದೆ, ನಟ ಕೃಷ್ಣ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಹಾಗೂ ಟಾಲಿವುಡ್’ನ ಸೂಪರ್ ಸ್ಟಾರ್ ನಟ ಕೃಷ್ಣ ಘಟ್ಟಮನೇನಿ (80) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ಬೆಳಗಿನಜಾವ ಅವರಿಗೆ ಲಘು ಹೃದಯಾಘಾತ ಸಂಭವಿಸಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.
ತೀವ್ರ ನಿಗಾ ಘಟಕದಲ್ಲಿ ಇರಿಸಿ, ಕೃಷ್ಣ ಅವರ ಆರೋಗ್ಯದ ಬಗ್ಗೆ ಕಾಳಜಿವಹಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸಿದ ಕೃಷ್ಣ ಅವರು ಮಂಗಳವಾರ ಬೆಳಗ್ಗೆ 4 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಕೃಷ್ಣ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಅಪಾರ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಸೆಪ್ಟೆಂಬರ್ 28ರಂದು ಕೃಷ್ಣ ಅವರ ಪತ್ನಿ ಇಂದಿರಾ ದೇವಿ ನಿಧನ ಹೊಂದಿದರು. ಆ ಬಳಿಕ ಕೃಷ್ಣ ಅವರು ಖಿನ್ನತೆಗೆ ಒಳಗಾದರು ಎನ್ನಲಾಗಿದೆ. ಈ ವರ್ಷ ಆರಂಭದಲ್ಲಿ ಕೃಷ್ಣ ಅವರ ಹಿರಿಯ ಪುತ್ರ ರಮೇಶ್ ಬಾಬು ಕೂಡ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದರು.
ಸೂಪರ್ ಸ್ಟಾರ್ ಕೃಷ್ಣ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸಿದ್ದಾರೆ








