F5 India News General News J. JOHN PREM EDITOR Political News

ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ಸೇರಿ ಐವರು ನಾಯಕರ ಭೇಟಿ

ಬೆಂಗಳೂರು: ಉಪ ಚುನಾವಣೆ ನಿಮಿತ್ತ ಎನ್ ಡಿಎ ಮೈತ್ರಿಕೂಟಕ್ಕೆ ಶಕ್ತಿ ತುಂಬುವ ಕಾರ್ಯತಂತ್ರದ ಭಾಗವಾಗಿ ನಾಳೆ (ಶನಿವಾರ) ರಾಜ್ಯ ಜೆಡಿಎಸ್ ನಾಯಕರು ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರು, ಮುಖಂಡರ ಸಭೆ ನಡೆಸಲಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ ಹಾಗೂ ಆಲ್ಕೋಡ್ ಹನುಮಂತಪ್ಪ ಅವರು ಈ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.

ಎರಡೂ ಕ್ಷೇತ್ರಗಳಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸುವ ಭಾಗವಾಗಿ ಜೆಡಿಎಸ್ ಸ್ಥಳೀಯ ಜೆಡಿಎಸ್ ಮುಖಂಡರು, ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಈ ಸಭೆಗಳನ್ನು ಆಯೋಜನೆ ಮಾಡಲಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡುವ ಅವರ ಸಂಕಲ್ಪದ ಭಾಗವಾಗಿ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಸಭೆಗಳನ್ನು ಆಯೋಜನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

johnprem

About Author

You may also like

General News

Coronavirus fears: Bangalore roads and theaters are empty

Bangalore: The number of people infected with coronavirus has risen to 4 in Bangalore. Against this backdrop, the roads in
General News

Coronavirus Effect: Bus Stop Stations Without People!

BANGALORE: Coronal fears are increasing day by day. Corona fears that business and trading will have a significant impact. Thus,