Entertainment F5 India News Karnataka News Karnataka State Police Police News Social News

Rcb ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ ಜೂ. 12 ರೊಳಗೆ ವರದಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಚಿನ್ನಸ್ವಾಮಿ ಸ್ಟೇಡಿಯಂ ಬಳಿಯ ದುರಂತಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಹೈಕೋರ್ಟ್ ನಲ್ಲಿ ಕೇಸ್ ವಿಚಾರಣೆ ನಡೆಯುತ್ತಿದೆ. ಇವತ್ತು ಕೇಸ್ ಸಂಬಂಧ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು 12ನೇ ತಾರೀಖಿಗೆ ಮುಂದೂಡಿದೆ.ರಾಜ್ಯ ಸರ್ಕಾರದ ವರದಿ ಬಂದ ಬಳಿಕ ಮತ್ತೊಮ್ಮೆ ವಿಚಾರಣೆ ನಡೆಸೋದಾಗಿ ಹೈ ಕೋರ್ಟ್ ಹೇಳಿದೆ.

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಇಂದು ಹೈಕೋರ್ಟ್‌ಲ್ಲಿ ವಿಚಾರಣೆ ನಡೆಸಲಾಯ್ತು. ಸರ್ಕಾರದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೈಕೋರ್ಟ್ ತಿಳಿಸಿದ್ದು, ಯಾವುದೇ ನಿರ್ದೇಶನ ನೀಡದೇ ವಿಚಾರಣೆಯನ್ನು ಮುಂದೂಡಲಾಗಿದೆ.

ದುರಂತದ ಬಳಿಕ ಯಾವುದೇ ಪ್ರಕರಣಗಳನ್ನು ದಾಖಲಾಗಿರಲಿಲ್ಲ. ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿತ್ತು. ಹಲವರಿಂದ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ವಿಚಾರಣೆಗೆ ಮನವಿ ಹಿನ್ನೆಲೆ ನ್ಯಾವಿ.ಕಾಮೇಶ್ವರ ರಾವ್ ಮತ್ತು ನ್ಯಾಸಿ.ಎಂ.ಜೋಶಿ ಅವರ ಪೀಠದಿಂದ ಇಂದು ವಿಚಾರಣೆ ಮಾಡಿದ್ದು, ಸರ್ಕಾರದ ಪ್ರತಿಕ್ರಿಯೆ ಬಂದ ನಂತರ ವಿಚಾರಣೆ ನಡೆಸಲು ತೀರ್ಮಾನಿಸಿದೆ.

johnprem

About Author

You may also like

Social News

Tirupati Temple has also taken precautions on Coronavirus.

Hyderabad: Indians fear the death of coronavirus virus in China Corona has created anxiety in the state, not only for
Social News

ORANGE TRAVELS V/S EMPLOYEES!

There is an allegation B/W Orange Travels Management and the employees. Orange Travels have removed a few employees from the