Crime F5 India News General News Social News

ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!

ತುಮಕೂರಿನಲ್ಲಿ ಬೆಳ್ಳಂಬೆಳ್ಳಿಗ್ಗೆ ಭೇಕರವಾದಂತಹ ಅಪಘಾತ ಸಂಭವಿಸಿದ್ದು, ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಒಂದು ರಸ್ತೆ ಪಕ್ಕದಲ್ಲಿರುವ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಈ ಒಂದು ಅಪಘಾತ ಸಂಭವಿಸಿದೆ.

ಹೌದು ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಬೆಳಗ್ಗಿನ ಜಾವ 4.30ರ ವೇಳೆಗೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನೆಲ್ಲ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಒಂದು ಖಾಸಗಿ ಬಸ್ ನಲ್ಲಿ 29 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದೆ.

ಗೋವಾದಿಂದ ಬೆಂಗಳೂರಿಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, 20 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ನಡೆದಿದೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಹಾಗೂ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

johnprem

About Author

You may also like

Social News

Tirupati Temple has also taken precautions on Coronavirus.

Hyderabad: Indians fear the death of coronavirus virus in China Corona has created anxiety in the state, not only for
General News

Coronavirus fears: Bangalore roads and theaters are empty

Bangalore: The number of people infected with coronavirus has risen to 4 in Bangalore. Against this backdrop, the roads in