ನಶಾ ಮುಕ್ತ ಭಾರತ ಅಭಿಯಾನ: ಯಶವಂತಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಡ್ರಗ್ಸ್ ಮುಕ್ತ ಭಾರತ ಅಭಿಯಾನ
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು CredoPress Media ಸಹಯೋಗದಲ್ಲಿ ಬೆಂಗಳೂರಿನ ಯಶವಂತಪುರದ ಕರ್ನಾಟಕ ಸರ್ಕಾರಿ ಪ್ರೌಢಶಾಲೆಯಲ್ಲಿ ನಶಾ ಮುಕ್ತ ಭಾರತ ಅಭಿಯಾನ – ಡ್ರಗ್ಸ್ ಮುಕ್ತ ಭಾರತ ಅಭಿಯಾನವನ್ನು ಆಯೋಜಿಸಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು. ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು, ಆರೋಗ್ಯಕರ ಹಾಗೂ ಜವಾಬ್ದಾರಿಯುತ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ನಾಗರಿಕರು ಹಾಗೂ […]













