ಒಟಿಟಿಗೆ ಬಂತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಫೈರ್ ಫ್ಲೈ..ಎಲ್ಲಿ? ಯಾವಾಗ ಸ್ಟ್ರೀಮಿಂಗ್?
ನಿವೇದಿತಾ ಶಿವರಾಜ್ ಕುಮಾರ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಫೈರ್ ಫ್ಲೈ ಸಿನಿಮಾವೀಗ ಒಟಿಟಿ ಎಂಟ್ರಿ ಕೊಟ್ಟಿದೆ. ಏಪ್ರಿಲ್ 24ರಂದು ರಿಲೀಸ್ ಆಗಿದ್ದ ಈ ಚಿತ್ರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಇದೀಗ ಫೈರ್ ಫ್ಲೈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಕಂಡಿದೆ. ಶ್ರೀಮುತ್ತು ಸಿನಿ ಸರ್ವೀಸ್ ಸಂಸ್ಥೆಯಡಿ ನಿವೇದಿತಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಫೈರ್ ಫ್ಲೈ ಸಿನಿಮಾವನ್ನು ವಂಶಿ ಕೃಷ್ಣ ನಟಿಸಿ, ನಿರ್ದೇಶಿಸಿದ್ದಾರೆ. ನಾಯಕಿಯಾಗಿ ರಚನಾ ಇಂದರ್ ಅಭಿನಯಿಸಿದ್ದರು. ಅಚ್ಯುತ್ ಕುಮಾರ್, ಸುಧಾರಾಣಿ, ಶೀತಲ್ […]







